ಡಾ|| ದ.ರಾ.ಬೇಂದ್ರೆ

ಕನ್ನಡದ ಪ್ರಖ್ಯಾತ ಅವಧೂತ ಕವಿ......


 

News

 

 



 



ವಿಶ್ವಮಾತೆಯ ಗರ್ಭಕಮಲಜಾತ-ಪರಾಗ-
ಪರಮಾಣು ಕೀರ್ತಿ ನಾನು |
ಭೂಮಿತಾಯಿಯ ಮೈಯ ಹಿಡಿಮಣ್ಣು ಗುಡಿಗಟ್ಟಿ
ನಿಂತಂಥ ಮೂರ್ತಿ ನಾನು !



ಭರತಮಾತೆಯ ಕೋಟಿ ಕಾರ್ತಿಕೋತ್ಸವದಲ್ಲಿ
ಮಿನುಗುತಿಹ ಜ್ಯೋತಿ ನಾನು !
ಕನ್ನಡದ ತಾಯಿ ತಾವರೆಯ ಪರಿಮಳವುಂಡು
ಬೀರುತಿಹ ಗಾಳಿ ನಾನು !

ನನ್ನ ತಾಯಿಯ ಹಾಲು ನೆತ್ತರವ ಕುಡಿದಂಥ
ಜೀವಂತ ಮಮತೆ ನಾನು !
ಈ ಐದು ಐದೆಯರೆ ಪಂಚಪ್ರಾಣಗಳಾಗಿ
ಈ ಜೀವ ದೇಹನಿಹನು !

ಹೃದಯಾರವಿಂದದಲ್ಲಿರುವ ನಾರಾಯಣನೆ
ತಾನಾಗಿ ದತ್ತ ನರನು !
ವಿಶ್ವದೊಳನುಡಿಯಾಗಿ ಕನ್ನಡಿಸುತಿಹನಿಲ್ಲಿ
ಅಂಬಿಕಾತನಯನಿವನು !

ಬೇಂದ್ರೆ ಕಾವ್ಯವಾಚನಕ್ಕಾಗಿ ಕ್ಲಿಕ್ಕಿಸಿ.


 
hit counter code
Designed & Developed by S.D.M. College of Engineering & Technology, Dharwad - 02 © 2005 • contactus